ಹೆಬ್ರಿ: ಎಸ್.ಆರ್. ಪಿ.ಯು. ಕಾಲೇಜು, ಹೆಬ್ರಿಯ ಎಸ್.ಆರ್. ಆಡಿಟೋರಿಯಂನಲ್ಲಿ ವಿದ್ಯಾರ್ಥಿಗಳಿಗಾಗಿ “ಭಾರತೀಯ ಸಶಸ್ತ್ರ ಪಡೆಗಳಲ್ಲಿ ವೃತ್ತಿ ಅವಕಾಶಗಳು” ಕುರಿತ ವಿಶೇಷ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮೇಜರ್ ಅಭಿಜೀತ್ ಸಿಂಗ್, ರಿಕ್ರುಟಿಂಗ್ ಮೆಡಿಕಲ್ ಆಫೀಸರ್, ಆರ್ಮಿ ರಿಕ್ರುಟಿಂಗ್ ಆಫೀಸರ್, ಮ್ಯಾಂಗಲೋರ್ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಪಡೆಯಲ್ಲಿರುವ ವಿವಿಧ ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಅವರು ಎನ್.ಡಿ.ಎ & ಎನ್.ಎ, ಟಿಇes, ಸಿಡಿಎಸ್, AFCAT, ಅಗ್ನಿವೀರ್ ಹಾಗೂ ಜೆಎಜಿ ಪ್ರವೇಶ ಯೋಜನೆಗಳು, ಆಯ್ಕೆ ಪ್ರಕ್ರಿಯೆ, ಅರ್ಹತೆ, ತರಬೇತಿ ಹಾಗೂ ದೇಶಸೇವೆಯ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವವನ್ನು ಬೆಳೆಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಿಥೇಶ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ವಿನಾಯಕ, ಅಮೃತ್ ಹಾಗೂ ಪ್ರಶಾಂತ ಅವರು ಕಾರ್ಯಕ್ರಮದ ಸಂಯೋಜನೆಯಲ್ಲಿ ಸಹಕರಿಸಿದರು. ಉಪನ್ಯಾಸಕಿ ಗೀತಾ ಪ್ರಭು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಾರತೀಯ ಸಶಸ್ತ್ರ ಪಡೆಗಳಲ್ಲಿನ ವೃತ್ತಿ ಅವಕಾಶಗಳ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.





















