Wednesday, July 29, 2026
Google search engine
Homeಕಾರ್ಕಳಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪ; ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಎಫ್‌ಐಆರ್ ದಾಖಲು

ಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪ; ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಎಫ್‌ಐಆರ್ ದಾಖಲು

ಕಾಂಗ್ರೆಸ್‌ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕೊಡವೂರು ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಪ್ರತಿಭಟನೆಯ ವೇಳೆ ಯಶ್ ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ದ್ವೇಷ ಭಾಷಣ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments