ಕಾರ್ಕಳ:ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕ್ರೈಸ್ಟ್ ಕಿಂಗ್ ನ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ನ ಹತ್ತನೇ ತರಗತಿಯ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಹತ್ತನೇ ಕ್ರೈಸ್ಟ್ ಕಿಂಗ್ ತರಗತಿಯ ಗಣ್ಯ ಪೂಜಾರಿ ರಾಷ್ಟçಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ರಾಮನಗರ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ರಾಮನಗರ ಇವರ ಜಂಟಿ ಆಶ್ರಯದಲ್ಲಿ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿದ್ದ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ಗಣ್ಯ ಪೂಜಾರಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.

ಮುಂದೆ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಗಣ್ಯ ಪೂಜಾರಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾಳೆ. ಸಾಧಕ ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

   

LEAVE A REPLY

Please enter your comment!
Please enter your name here