ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಜು.30 ರಂದು ನಡೆದಿದೆ. ಬಾಬು ಗೌಡ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕುಟುಂಬದ ಮಾಹಿತಿ ಪ್ರಕಾರ, ಮೃತರು ಒಬ್ಬರೇ ಮನೆಯಲ್ಲಿ ವಾಸಿಸುತ್ತಿದ್ದು, ಊಟೋಪಚಾರವನ್ನು ಮಕ್ಕಳು ನೋಡಿಕೊಳ್ಳುತ್ತಿದ್ದರು. ಎಂದಿನಂತೆ ಮೃತರ ಮಗಳು ಬೆಳಗ್ಗೆ ಚಾ-ತಿಂಡಿ ಕೊಡಲು ಮನೆಗೆ ಹೋದ ವೇಳೆ ಮನೆಯಲ್ಲಿ ಅವರು ಇರದುದ್ದನ್ನು ಗಮನಿಸಿ ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತರು ತೀವ್ರ ಕುಡಿತದ ಚಟ ಹೊಂದಿದ್ದು, ಈ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಮಗ ನೀಡಿದ ದೂರಿನ ಅನ್ವಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















