ನಗರದ ಕಸಬಾ ಗ್ರಾಮದ ಕಟ್ಟಡದ ಮೇಲ್ಟಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉಮರಾಲಿ (56) ಬುಧವಾರ ಬಿದ್ದು ಗಾಯಗೊಂಡಿದ್ದರು. ಅವರನ್ನು ತತ್‌ಕ್ಷಣ ಕಾರ್ಕಳದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುರಕ್ಷೆ ಕ್ರಮ ಗಳನ್ನು ಕೈಗೊಳ್ಳದೆ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ ಮಾಲಕರ ವಿರುದ್ಧ ಕಾರ್ಕಳ ನಗರ ಪೊಲೀಸರಿಗೆ ದೂರು ನೀಡಲಾಗಿದೆ.




























