Tuesday, August 25, 2026
Google search engine
Homeಕಾರ್ಕಳನಿಟ್ಟೆ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

ನಿಟ್ಟೆ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

ನಿಟ್ಟೆ ಗ್ರಾಮದ ಹೊಟೇಲ್ ಒಂದರಲ್ಲಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಜುಗಾರಿ ಆಡುತ್ತಿದ್ದ ಅಡ್ಡೆಯ ಮೇಲೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಸುಜೀತ್, ಅಭಿಮನ್ಯು, ಮಹೇಶ್, ಧೀರಜ್, ನರೇಶ್ ಕುಮಾರ್‌ ಹಾಗೂ ಪ್ರಶಾಂತ್ ಅವರನ್ನು ವಶಕ್ಕೆ ಪಡೆದರು.

ಈ ವೇಳೆ ಯಶೋಧರ, ನೂರು ಮಹಮ್ಮದ್, ರವಿ ಶೆಟ್ಟಿ ಹಾಗೂ ಸತೀಶ್ ಪರಾರಿಯಾಗಿದ್ದಾರೆ. ದಾಳಿಯ ವೇಳೆ ಜುಜಾಟಕ್ಕೆ ಬಳಸಲಾಗಿದ್ದ 16,350 ರೂ.ನಗದು, ಏಳು ಮೊಬೈಲ್ ಫೋನ್ ಗಳು ಹಾಗೂ ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೋಟೆಲ್ ಮಾಲಕರ ಪತ್ತೆಗೆ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments