Thursday, October 8, 2026
Google search engine
Homeಹೆಬ್ರಿ ಎಸ್. ಆರ್. ಪಬ್ಲಿಕ್ ಸ್ಕೂಲ್ ಹೆಬ್ರಿ: “ಶೈನಿಂಗ್ ಬ್ರೈಟ್” ಕಾರ್ಯಕ್ರಮ

 ಎಸ್. ಆರ್. ಪಬ್ಲಿಕ್ ಸ್ಕೂಲ್ ಹೆಬ್ರಿ: “ಶೈನಿಂಗ್ ಬ್ರೈಟ್” ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಅವರ ಪ್ರತಿಭೆಗೆ ಅವಕಾಶ ನೀಡಬೇಕು: ಎಚ್.ನಾಗರಾಜ್ ಶೆಟ್ಟಿ

ಎಸ್. ಆರ್. ಪಬ್ಲಿಕ್ ಸ್ಕೂಲ್ ಹೆಬ್ರಿಯಲ್ಲಿ ಶಾಲೆಯ ಎಸ್. ಆರ್. ಸಭಾಂಗಣದಲ್ಲಿ “ಶೈನಿಂಗ್ ಬ್ರೈಟ್” ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಅವರವರ ಪ್ರತಿಭೆಗಳಿಗೆ ಅವಕಾಶ ನೀಡಿದರೆ ಮುಂದೆ ಆ ವಿದ್ಯಾರ್ಥಿಗಳು ಅವರವರ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ. ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಚ್. ನಾಗರಾಜ್ ಶೆಟ್ಟಿ ಅವರು ಹೇಳಿದರು.

ಇವರು ಎಸ್.ಆರ್ ಪಬ್ಲಿಕ್ ಸ್ಕೂಲ್ (ಕೇಂದ್ರೀಯ ಪಠ್ಯಕ್ರಮ) 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಶೈನಿಂಗ್ ಬ್ರೈಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಮಾತನಾಡಿ, ಪುಟಾಣಿ ಮಕ್ಕಳ ಪ್ರತಿಭೆಗಳು ಪ್ರತಿಯೊಬ್ಬರ ಮನಸ್ಸನ್ನು ಆಕರ್ಷಿಸುತ್ತದೆ. ಇಂದು ಎಲ್ಲರೂ ಸಂಭ್ರಮಿಸಿ, ಭಾಗವಹಿಸಿ ಎಲ್ಲರೂ ಅವಕಾಶವನ್ನು ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪಪ್ರಾಂಶುಪಾಲರಾದ ದೀಪಕ್ ಎನ್, ಕೋಓರ್ಡಿನೇಟರ್ ಸುಜಾತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವು ನಡೆಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ 5ನೇ ತರಗತಿಯ ಆತ್ಮಿ ನಿರೂಪಿಸಿ, 4ನೇ ತರಗತಿಯ ಬ್ರಾಹ್ಮಿ ಸ್ವಾಗತಿಸಿ, 5ನೇ ತರಗತಿಯ ಆಸ್ತಿಕ್ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments