Monday, August 24, 2026
Google search engine
Homeಹೆಬ್ರಿಹೆಬ್ರಿ ಎಸ್. ಆರ್. ಪಬ್ಲಿಕ್ ಸ್ಕೂಲ್ ನಲ್ಲಿ "ಸ್ಪೆಕ್ಟ್ರಂ ಆಫ್ ಯುನಿಟಿ” ಕಾರ್ಯಕ್ರಮ

ಹೆಬ್ರಿ ಎಸ್. ಆರ್. ಪಬ್ಲಿಕ್ ಸ್ಕೂಲ್ ನಲ್ಲಿ “ಸ್ಪೆಕ್ಟ್ರಂ ಆಫ್ ಯುನಿಟಿ” ಕಾರ್ಯಕ್ರಮ

ಎಸ್. ಆರ್. ಪಬ್ಲಿಕ್ ಸ್ಕೂಲ್ ಹೆಬ್ರಿಯಲ್ಲಿ ಆ. 14 ರಂದು ಶಾಲೆಯ ಎಸ್. ಆರ್. ಸಭಾಂಗಣದಲ್ಲಿ “ಸ್ಪೆಕ್ಟ್ರಂ ಆಫ್ ಯುನಿಟಿ” ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಬೇರೆ‌ ಬೇರೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು: ಎಚ್.ನಾಗರಾಜ್ ಶೆಟ್ಟಿ
ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ತೋರ್ಪಡಿಸಲು ಇಂತಹ ವೇದಿಕೆ ಅವಶ್ಯಕ. ನೀವು ಬೇರ ಬೇರೆ ಕ್ಷೇತ್ರದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಬೇಕು. ನಿಮ್ಳ ಗುರಿಯನ್ನು ತಲುಪಲು ಸದಾ ಕಾಲ ಪ್ರಯತ್ನ ಪಡಬೇಕು. ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಚ್. ನಾಗರಾಜ್ ಶೆಟ್ಟಿ ಅವರು ಹೇಳಿದರು.

ಇವರು ಎಸ್.ಆರ್ ಪಬ್ಲಿಕ್ ಸ್ಕೂಲ್ (ಕೇಂದ್ರೀಯ ಪಠ್ಯಕ್ರಮ) 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ “ಸ್ಪೆಕ್ಟ್ರಂ ಆಫ್ ಯುನಿಟಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಮಾತನಾಡಿ, ಅಚ್ಚುಕಟ್ಟಾಗಿ ಇಂದಿನ ಕಾರ್ಯಕ್ರಮದ ವ್ಯವಸ್ಥೆಯನ್ನು ಮಾಡಿದ್ದೀರಿ. ಇಂದು ನಿಮ್ಮ ನಿಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿ. ಕಾರ್ಯಕ್ರಮ ಆಯೋಜಿಸಿದ ಶಿಕ್ಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ. ಎಲ್ಲರೂ ಸಂಭ್ರಮಿಸಿ, ಭಾಗವಹಿಸಿ ಎಲ್ಲರೂ ಅವಕಾಶವನ್ನು ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪಪ್ರಾಂಶುಪಾಲರಾದ ದೀಪಕ್ ಎನ್, ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ್ ಆಚಾರ್ಯ, ಕೋಓರ್ಡಿನೇಟರ್ ಅಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ಕರ್ನಾಟಕ, ತಮಿಳುನಾಡು, ಕೇರಳ, ರಾಜಸ್ಥಾನ, ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ವೈದಿಧ್ಯತೆಯನ್ನು ಸಾರುವ ತಿಂಡಿ-ತಿನಿಸುಗಳು, ಮೊಡೆಲ್ಗಳು, ಚಿತ್ರಗಳು, ಪೇಪರ್ ಕ್ರಾಫ್ಟ್ ಗಳು ಆಕರ್ಷಣೆಯಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವು ನಡೆಯಿತು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕೌಶಿಕ್ ಆರ್ ಜೆ ನಿರೂಪಿಸಿ, ಯೋಗಿತ್ ಎಸ್ ಸ್ವಾಗತಿಸಿ, ನರ್ಮದಾ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments