Tuesday, August 25, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್: 80ನೇ ಸ್ವಾತಂತ್ರ್ಯೋತ್ಸವ

ಕ್ರೈಸ್ಟ್ ಕಿಂಗ್: 80ನೇ ಸ್ವಾತಂತ್ರ್ಯೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬೋಧಕ-ಬೋಧಕೇತರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವಾನಾಥ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು “ನಾವು ಇಂದು ಧೈರ್ಯದಿಂದ ನೆಮ್ಮದಿಯ ಬದುಕು ಸಾಗಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಮಾಡಿದ ಹೋರಾಟ, ತ್ಯಾಗ, ಬಲಿದಾನ ಕಾರಣ. ಅಂತಹ ಮಹಾತ್ಮರನ್ನು ಸದಾ ನೆನಪಿಸಿಕೊಳ್ಳಬೇಕು. ಇದರ ಜೊತೆಗೆ ನಮ್ಮ ದೇಶಕ್ಕಾಗಿ ಇಂದೂ ಬಲಿದಾನಗೈಯುತ್ತಿರುವ ಸೈನಿಕರನ್ನು ಸ್ಮರಿಸಬೇಕು. ಯುವ ಜನತೆ ವ್ಯಸನಮುಕ್ತ, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಶಪಥ ಮಾಡಬೇಕು. ಆ ಮೂಲಕ ಶಾಂತಿ, ಸಮೃದ್ಧ ಹಾಗೂ ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸಬೇಕು” ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಅವರನ್ನು ಶಾಲು ಹೊದಿಸಿ ಫಲಪುಷ್ಪಗಳನ್ನಿತ್ತು ಸನ್ಮಾನಿಸಲಾಯಿತು.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಶ್ರೀರಾಗ್ ಡಿ.ಪಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಐ.ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಸಿಸ್ಟರ್ ಜಾಲಿ ಜೇಕಬ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ನಿತೀಶ್ ಶೆಟ್ಟಿ, ಪ್ರೌಢಶಾಲಾ ವಿಭಾಗದ ವಿಶ್ವಾನಾಥ ಪೂಜಾರಿ, ಪ್ರಾಥಮಿಕ ವಿಭಾಗದ ವನಿತಾ ಶೆಟ್ಟಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್ ಕಾರ್ಯಕ್ರಮ ಸಂಘಟಿಸಿದ್ದರು. ಸಂಸ್ಥೆಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಿಯಾ ಸಂದೀಪ್ ಸ್ವಾಗತಿಸಿ ಪದವಿಪೂರ್ವ ವಿಭಾಗದ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಆರತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments