Monday, August 24, 2026
Google search engine
Homeಕಾರ್ಕಳಆ. 21ರಂದು ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ –...

ಆ. 21ರಂದು ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ – ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಜನ್ಮದಿನದ ಅಂಗವಾಗಿ ಆ. 21ರಂದು ಕಾರ್ಕಳ ಗಣಿತನಗರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಹಾಗೂ ಹಳೆವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆಯುವ ರಕ್ತದಾನ ಶಿಬಿರವನ್ನು ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಮುಖ್ಯಸ್ಥ ಪ್ರೊಫೆಸರ್ ಡಾ. ಗಣೇಶ್ ಮೋಹನ್ ಉದ್ಘಾಟಿಸಲಿದ್ದಾರೆ.

ಸನ್ಮಾನ ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರನ್ನು ಸನ್ಮಾನಿಸಲಾಗುವುದು ಹಾಗೂ ಆ ಸಂಸ್ಥೆಗಳಿಗೆ ಕಿರು ಧನ ಸಹಾಯವನ್ನು ನೀಡಲಾಗುವುದು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ತಾಜ್ ಗ್ಲಾಸ್ ಮಾಲಕ ಗಣಪತಿ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಕಳ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

JnanaSudha Logo

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments