ಕಲಾ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ – ರವೀಂದ್ರ ಹೆಗ್ಡೆ
ಗ್ರಾಮೀಣ ಪ್ರದೇಶವಾದ ಹೆಬ್ರಿಯಲ್ಲಿ ಚಾಣಕ್ಯ ಶಿಕ್ಷಣ ಸಂಸ್ಥೆ ಕಳೆದ 12 ವರ್ಷಗಳಿಂದ ಗುಣಮಟ್ಟದ ವಿವಿಧ ಕಲಾಪ್ರಕಾರಗಳ ತರಬೇತಿ ಜೊತೆಗೆ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಚಿತ್ರಕಲಾ ತರಬೇತಿ ನೀಡಿ ಅವರಲ್ಲಿರುವ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿರುತ್ತಿರುವುದು ಶ್ಲಾಘನೀಯ ಎಂದು ಮುದ್ರಾಡಿ ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಹೇಳಿದರು.
ಅವರು ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ ,ಲಯನ್ಸ್ ಕ್ಲಬ್ ಹೆಬ್ರಿ ಸಿಟಿ,ಬಂಟರ ಭವನ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿ ಶ್ರೀಮತಿ ಶೀಲಾ ಸುಭೋದ ಬಲ್ಲಾಳ್ ಬಂಟರ ಭವನದಲ್ಲಿ ನಡೆದ ನಡೆದ 10ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಚಾಣಕ್ಯ ಸಂಸ್ಥೆಯಲ್ಲಿ ಕೇವಲ ತರಬೇತಿ ಮಾತ್ರ ನೀಡದೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸುತ್ತಿರುವುದು ಮಾದರಿ ಕಾರ್ಯ ಎಂದು ಹೆಬ್ರಿ -ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಬಿ. ಹರ್ಷ ಶೆಟ್ಟಿ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು. ಶೆಟ್ಟಿ ವಹಿಸಿ ಮಾತನಾಡಿ ನಮ್ಮಲ್ಲಿ ಕಲಿತ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆ ಅನಿಸುತ್ತದೆ. ಎಲ್ಲಾ ಕಲಾ ಪ್ರಕಾರಗಳ ತರಬೇತಿಯ ಜೊತೆ ಕಳೆದ ಏಳು ವರ್ಷಗಳಿಂದ ಉಚಿತ ಚೆಸ್ ತರಗತಿಯನ್ನು ನಡೆಸುತ್ತಿದ್ದು ಆಸಕ್ತಿ ಇರುವವರು ತರಗತಿಗೆ ಸೇರಬಹುದು ಎಂದರು.
ಮುದ್ರಾಡಿ ಎಸ್ ಎಂ ಡಿ ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ,ಹೆಬ್ರಿ ಜೇಸಿಐ ನಿಕಟ ಪೂರ್ವ ಅಧ್ಯಕ್ಷೆ ಸೋನಿ ಪಿ. ಶೆಟ್ಟಿ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷೆ ಆಶಾ ಬಿ.ಶೆಟ್ಟಿ,ಕಾರ್ಯದರ್ಶಿ ರಘುರಾಮ್ ಶೆಟ್ಟಿ, ಕೋಶಾಧಿಕಾರಿ ಮಹಾಬಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸುಪ್ರಿತಾ ಸಹಕರಿಸಿದರು. ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹೆಬ್ರಿ ಉದಯ್ ಕುಮಾರ್ ಸ್ವಾಗತಿಸಿ, ಲಯನ್ಸ್ ಜಿಲ್ಲಾ ಪ್ರಮುಖ ಟಿ.ಜಿ. ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು ವಂದಿಸಿದರು. ಹೆಬ್ರಿ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪೆನ್ಸಿಲ್ ಪೆನ್ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು.




















