ತಿಪಟೂರು ಮೂಲದ ವಿದ್ಯಾರ್ಥಿ ಚಿರಾಗ್ ಹಾಸ್ಟೆಲ್‌ನಲ್ಲಿ ಆ.21ರಂದು ಬೆಳಗ್ಗೆ ಕುಸಿದು ಬಿದ್ದಿದ್ದು ಆತನನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















