ಉಡುಪಿ ಶಿರ್ವದಲ್ಲಿ ಇತ್ತೀಚೆಗೆ ನಡೆದ ಉದ್ಯಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತನಿಖೆಗಾಗಿ ಪೊಲೀಸ್ ವಾಹನದಲ್ಲಿ ಕರೆತರುವ ವೇಳೆ. ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಆರೋಪಿ ಮೂತ್ರ ವಿಸರ್ಜನೆಗೆ ಎಂದು ಪೊಲೀಸ್ ವಾಹನದಿಂದ ಇಳಿದಾಗ. ಪೊಲೀಸರಿಂದ ಪರಾರಿ ಯಾಗಲು ಯತ್ನಿಸಿದನು. ಇದೇ ವೇಳೆ ಪೊಲೀಸರು ಆತನ ಕಾಲಿಗೆ ಗುಂಡೇಟು ಹೊಡೆದು. ಆರೋಪಿಯನ್ನು ಹಿಡಿದಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಆರೋಪಿಯನ್ನು ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ .


















