ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ವತಿಯಿಂದ ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಉಡುಪಿ ಜಿಲ್ಲಾ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ.
ಬಾಲಕರ ತಂಡದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೆವಿನ್ ಮಾರನ್ ಹಾಗೂ ವೇದಾಂತ್ ವೀರೇಂದ್ರ ಲಿಗಾಡೆ, ಬಾಲಕಿಯರ ತಂಡದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೃತಿ ಕೆ ಶೆಟ್ಟಿ, ಹಾಗೂ ನಮೃತಾ ಎನ್ ಆರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.



















