ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ ಸಿ. ಜೋಸೆಫ್ ವಿಜಯ್ ಅವರು ದೇಶದ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಬಹುದಾದ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಇಂಡಿಯಾ ಟುಡೇ–ಸಿವೋಟರ್‌ನ ‘ಮೂಡ್ ಆಫ್ ದಿ ನೇಷನ್’ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ ವಿಜಯ್ ಸ್ಥಾನ ಪಡೆದಿದ್ದಾರೆ.
ಮುಂದಿನ ಪ್ರಧಾನಿಯಾಗಿ ಯಾರನ್ನು ನೋಡಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಶೇ 9.2ರಷ್ಟು ಮಂದಿ ವಿಜಯ್ ಅವರ ಹೆಸರನ್ನು ಸೂಚಿಸಿದ್ದಾರೆ. ಮೋದಿ ಅವರಿಗೆ ಶೇ 48.7 ಮತ್ತು ರಾಹುಲ್ ಗಾಂಧಿ ಅವರಿಗೆ ಶೇ 27.1ರಷ್ಟು ಬೆಂಬಲ ವ್ಯಕ್ತವಾಗಿದೆ.



















