ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಮುಂದುವರಿಯಬೇಕೇ ಎಂಬ ಗೊಂದಲದಲ್ಲಿ ಪಕ್ಷದವರಿಷ್ಠರು ಹಾಗೂ ನಾಯಕತ್ವವಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆ.1 ರಿಂದ 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆ ಘೋಷಣೆ ಮಾಡಿದೆ. ಬಿಜೆಪಿ ಪಾದಯಾತ್ರೆಗೆ ಮುನ್ನವೇ ನಾಗೇಂದ್ರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಮತ್ತು ಕಾಂಗ್ರೆಸ್ ಹೈಕಮಾಂಡ್ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.



















