Wednesday, September 2, 2026
Google search engine
Homeಕಾರ್ಕಳಕಾರ್ಕಳ: ಮನೆ ಮೆಟ್ಟಿಲಿನಿಂದ ಬಿದ್ದು ಸಾವು

ಕಾರ್ಕಳ: ಮನೆ ಮೆಟ್ಟಿಲಿನಿಂದ ಬಿದ್ದು ಸಾವು

ಮನೆ ಮೆಟ್ಟಿಲಿನಿಂದ ಬಿದ್ದು ತಲೆಗೆ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟ ಘಟನೆ ಕಲ್ಯಾ ಗ್ರಾಮದಲ್ಲಿ ನಡೆದಿದೆ.

ಕರುಣಾಕರ ಆರ್. ನಾಯ್ಕ (54) ನಸುಕಿನ ಜಾವ ಮನೆಯಿಂದ ಹೊರಗಡೆ ಹೋಗುವಾಗ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ತಲೆಗೆ ಗಾಯವಾಗಿತ್ತು. ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ವೈದ್ಯಾಧಿಕಾರಿಯವರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆ ಬಗ್ಗೆಮಂಗಳೂರಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ವೈದ್ಯರ ಸಲಹೆ ಮೇಲೆ ತುರ್ತು ಚಿಕಿತ್ಸಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಆ. 30ರಂದು ಮೃತಪಟ್ಟರು. ಅವರು ಬಿ.ಪಿ. ಶುಗರ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments