Saturday, September 5, 2026
Google search engine
Homeಕರಾವಳಿಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರ ನಾಯ್ಕ್‌ ಎಚ್, ಮಣಿಪಾಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಶ್ರೀಮತಿ ಇಂದಿರಾ ರಾವ್‌, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ. ಮತ್ತು ಪರ್ಕಳ ಪ್ರೌಢಶಾಲೆ ಪರ್ಕಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಆನಂದ ನಾಯ್ಕ್‌ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರ ಪ್ರಶಸ್ತಿ ವಿಜೇತ ಉಪನ್ಯಾಸಕರಾದ ಶ್ರೀ ಸುರೇಶ್‌ ಮರಕಾಲ ಇವರನ್ನೂ ಸನ್ಮಾನಿಸಲಾಯಿತು.

ಸನ್ಮಾನಿತರಾದ ಶ್ರೀ ಚಂದ್ರ ನಾಯ್ಕ್‌ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕಷ್ಟವನ್ನು ಮೀರಿ ನಿಂತಾಗ ಸಾಧನೆ ಸಾಧ್ಯ, ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪೃವೃತ್ತರಾಗಲಿ ಎಂದು ಶುಭ ಹಾರೈಸಿದರು . .ಹಿ.ಪ್ರಾ.ಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ ಮಾತನಾಡಿ ವಿದ್ಯಾರ್ಥಿಗಳು ಸಂಪಾದನೆಯ ಜೊತೆಗೆ ಮೌಲ್ಯಗಳನ್ನು ಅಳವಡಿಸಿ ಭವಿಷ್ಯದ ಉತ್ತಮ ಪ್ರಜೆಗಳಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ  ಶ್ರೀ ಸುರೇಶ್‌ ಮರಕಾಲ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಾನು ಬೆಳೆದು ಬಂದ ಹಾದಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು. ತಪ್ಪು ಮಾಡಿದವರನ್ನು ತಿದ್ದುವ ಕಾಯಕಕ್ಕಿಂತ ತಪ್ಪೇ ಮಾಡದ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಂಡು ಶಿಕ್ಷಕನಾಗುವ ಘನತೆ ದೊಡ್ಡದು.ಪ್ರತೀ ಸಾಧನೆಯ ಹಿಂದೆ ಗುರುವಿನ ಪರಿಶ್ರಮವಿದೆ ಎನ್ನುವುದನ್ನು ವಿದ್ಯಾರ್ಥಿಗಳು ಮರೆಯಬಾರದು. ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡುವ ಜ್ಞಾನಸುಧಾದ ಕಾರ್ಯ ನಿರಂತರವಾಗಿ ಸಾಗಲಿ ಎಂದು ಶುಭ ಹಾರೈಸಿದರು.ಅಜೆಕಾರು ಪದ್ಮಗೋಪಾಲ ಎಜ್ಯಕೇಶನ್‌ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ ಸ್ವಾಗತಿಸಿ,ಕನ್ನಡ ಉಪನ್ಯಾಸಕಿಯಾದ ಕು.ಮಂಜುಳ ಕಾರ್ಯಕ್ರಮ ನಿರ್ವಹಿಸಿದರು. ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ,ನವೀನ್‌ , ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments