Wednesday, September 9, 2026
Google search engine
Homeಕರಾವಳಿ ಉಡುಪಿ ತಾಲೂಕು ಮಟ್ಟದ ಫುಟ್ಬಾಲ್‌ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪ್ರಥಮ  

 ಉಡುಪಿ ತಾಲೂಕು ಮಟ್ಟದ ಫುಟ್ಬಾಲ್‌ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪ್ರಥಮ  

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್‌ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ದಿನಾಂಕ: 08-09-2026ಮಂಗಳವಾರದಂದು ನಡೆಯಿತು.

 ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ಕೆಂಪರಾಜ್ ಎಚ್.ಬಿ., ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು, ಮಾಹೆ, ಮಣಿಪಾಲ ಇವರು ಮಾತನಾಡಿ ಕ್ರೀಡೆ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ನಮ್ಮನ್ನು ಸ್ವಾಸ್ಥ್ಯ, ಸದೃಢ, ಉತ್ತಮ ವ್ಯಕ್ತಿತ್ವದ ನಡೆನುಡಿಯುಳ್ಳ ಆರೋಗ್ಯವಂತ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಕ್ರೀಡೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಹಾಗೂ ಆಟಗಳಲ್ಲಿ ನಮ್ಮನ್ನು ನಾವು ಏಕಾಗ್ರತೆಯಿಂದ ತೊಡಗಿಸಿಕೊಳ್ಳುವುದರಿಂದ ಉತ್ತಮ ಶಿಕ್ಷಣದ ಕಲಿಕೆಗೂ ಕೂಡ ಅದು ಸಹಾಯ ಮಾಡುತ್ತದೆ ಎಂದು ಹೇಳಿದರು.  

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ  ದಿನೇಶ್ ಕುಮಾರ್ , ಕ್ರೀಡಾ ಸಂಯೋಜಕರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಉಡುಪಿ ಜಿಲ್ಲೆ ಇವರು ಮಾತನಾಡಿ  ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳೆಲ್ಲರೂ ಶಿಸ್ತು ಸಂಯಮದಲ್ಲಿ ಎಲ್ಲಾ ನಿಯಮಗಳಿಗೆ ಅನುಸಾರವಾಗಿ ಆಟವಾಡಿ, ಉತ್ತಮವಾದ ಪ್ರದರ್ಶನವನ್ನು ನೀಡುವುದರೊಂದಿಗೆ ಗೆಲುವು ನಿಮ್ಮದಾಗಲಿ ಎಂದು ಶುಭಾಶಯವನ್ನು ಕೋರಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಗಣೇಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಕ್ರೀಡಾ ಸಂಯೋಜಕರಾದ ಮಂಜುನಾಥ ಜೋಗಿ, ಮಣಿಪಾಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪಾ ಎಲ್.‌ ಭಟ್, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ರವಿ ಜಿ ಮತ್ತು ಹೇಮಂತ ಉಪಸ್ಥಿತರಿದ್ದರು. 

ಸಮಾರೋಪ ಸಮಾರಂಭ:ಸಮಾರೋಪ ಸಮಾರಂಭದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉದ್ಯಮಿ ರಾಜೇಶ್‌ ಹೆಗ್ಡೆ ಮತ್ತು ಕೋಟ ಸಹಕಾರಿ ಸಂಘದ ಮ್ಯಾನೇಜರ್‌  ಸಂದ್ಯಾ ರಾಜೇಶ್‌ ಹೆಗ್ಡೆಅಗಮಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂದ್ಯಾ  ರಾಜೇಶ್‌ ಹೆಗ್ಡೆಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಇವರು ವಹಿಸಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ವಂದಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ  ಶಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments