Thursday, September 17, 2026
Google search engine
Homeಕಾರ್ಕಳಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ2026-27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ರೋರ‍್ಯಾಕ್ಟ್ ಕ್ಲಬ್‌ನ ಮಾಜಿ ಅಧ್ಯಕ್ಷರಾದ ರೇಖಾ ಉಪಾಧ್ಯಾಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಇವರು ತಮ್ಮ ಭಾಷಣದಲ್ಲಿ ನಾಯಕತ್ವ ಎಂದರೆ ಅಧಿಕಾರವಲ್ಲ ಅದು ಜವಾಬ್ದಾರಿ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿನಿಯರಿಗೆ ಮಹತ್ವದ ವೇದಿಕೆಯಾಗಿದೆ. ವಿದ್ಯಾರ್ಥಿ ಸಂಘದ ಪ್ರತಿಯೊಬ್ಬ ಪದಾಧಿಕಾರಿಯು ತನ್ನ ಸ್ಥಾನವನ್ನು ಗೌರವದ ಸಂಕೇತವಾಗಿ ನೋಡದೆ ಸೇವೆಯ ಅವಕಾಶವಾಗಿ ನೋಡಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಕಾಲೇಜಿನ ಅಭಿವೃದ್ಧಿಗೆ ಸಹಕರಿಸಿ ಎಲ್ಲರನ್ನು ಸಮಾನವಾಗಿ ಗೌರವಿಸುವ ಮೂಲಕ ಮಾದರಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಚಿದಾನಂದ ಶೆಟ್ಟಿ ವಿದ್ಯಾರ್ಥಿ ನಾಯಕಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಹನ.ಎಸ್.ನಾಯಕ್ ಅಂತಿಮ ಬಿ.ಕಾಂ ಇವರು ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಇಳಾದೇವಿ ಆಂತಿಮ ಬಿ.ಕಾಂ , ಆಶೀಯಾ ಬಾನು ತೃತೀಯ ಬಿ.ಎ ಮತ್ತು ಪಾವನಿ ತೃತೀಯ ಬಿ.ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಾತಿ ಅಂತಿಮ ಬಿ.ಎ ಇವರು ವಂದಿಸಿ, ಕು. ವೈಶ್ಣವಿ ಪ್ರಥಮ ಬಿ.ಕಾಂ ಇವರು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments