Saturday, September 19, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್: ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್: ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ 14ರ ವಯೋಮಿತಿ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಏಳನೇ ತರಗತಿಯ ತ್ರಿಷ್ಮ, ಸೃಷ್ಟಿ ಎಸ್ ಪೂಜಾರಿ, ಕೇಟ್ಲಿನ್ ಏಂಜಲ್ ಪಿಂಟೊ, ಎಲ್ಸ ರುಬೇಲ್ ಡಿಸೋಜ, ಅನ್ವಿತಾ ಬಿ ಶೆಟ್ಟಿ, ಪ್ರನ್ವಿ ಎಸ್ ದೇವಾಡಿಗ ಹಾಗೂ ಆರನೇ ತರಗತಿಯ ನಿಶಾ ಡಿಸೋಜ, ಅಲಿಷ ಡಿಸೋಜ, ಸಾತ್ವಿ ಶೆಟ್ಟಿ, ಆಯಿಷಾ ಮಹಿನ್ ತಂಡವನ್ನು ಪ್ರತಿನಿಧಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments