ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ 2026-27 ನೇ ಸಾಲಿನ ಸಾಹಿತ್ಯ ಸಂಘವನ್ನು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಡಾ| ಸುಮತಿ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಓದು ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತದೆ. ಸಾಹಿತ್ಯದ ಒಡನಾಟವಿರುವ ವಿದ್ಯಾರ್ಥಿ ಎಂದಿಗೂ ದಾರಿ ತಪ್ಪಲಾರ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯ ಪುಸ್ತಕಗಳ ಜೊತೆಗೆ ಸಾಹಿತ್ಯಿಕ ಪುಸ್ತಕಗಳು ಓದುವ ಹವ್ಯಾಸ ಬೆಳೆಸಿಕೊಂಡಾಗ ಒಬ್ಬ ಪ್ರಜ್ಞಾವಂತ ಪ್ರಜೆಯಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೋ. ಗೀತಾ ಜಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಸಂಘದ ಅಧ್ಯಕ್ಷೆ ರೇಖಾ ಸ್ವಾಗತಿಸಿದರು. ಆಸೀಯಾ ಅಮ್ರೀನ್ ಕಾರ್ಯಕ್ರಮ ನಿರೂಪಿಸಿ ನಿರೀಕ್ಷಾ ವಂದಿಸಿದರು.


























