ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC), ಶೈಕ್ಷಣಿಕ ಕ್ಷೇತ್ರದ ಸದಸ್ಯರಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ರವರು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕನಾಗಿ, ವಿಭಾಗದ ಮುಖ್ಯಸ್ಥರಾಗಿ, ಪ್ರಸ್ತುತ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶ್ರೀಯುತರು 2018ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ.ವಿಶಾಲಕ್ಷಿ ಬಿ. ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಕೆಮಿಸ್ಟ್ಸ್(ಐ.ಸಿ.ಸಿ.) ಹಾಗೂ ದ ಸೊಸೈಟಿ ಫಾರ್ ಪಾಲಿಮರ್ ಸೈನ್ಸ್ ಇಂಡಿಯಾ (ಎಸ್.ಪಿ.ಎಸ್) ಇದರ ಆಜೀವ ಸದಸ್ಯರಾಗಿರುವ ಇವರು, ಬ್ರಹ್ಮಾವರದ ಮುತ್ತ ಸುವರ್ಣ ಮತ್ತು ನರ್ಸಿ ಕೋಟ್ಯಾನ್ ದಂಪತಿಗಳ ಸುಪುತ್ರನಾಗಿರುತ್ತಾರೆ. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.


























