ಹೆಬ್ರಿಯ ಎಸ್.ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಕರಾಟೆ ತರಗತಿಯ ಬೆಲ್ಟ್ ಪರೀಕ್ಷೆಯ ನಡೆಯಿತು. ವಿಜೇತ ವಿದ್ಯಾರ್ಥಿಗಳು ಬಿಳಿಹಳದಿ ಬೆಲ್ಟ್ ಪಡೆದರು.
ಕಾರ್ಯಕ್ರಮದ ಅಭ್ಯಾಗತರಾಗಿದ್ದ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಅವರು ಮಾತನಾಡಿ, ಕರಾಟೆ ನಮ್ಮಲ್ಲಿ ಶಿಸ್ತು, ಸಂಯಮ, ದೈಹಿಕ ಮತ್ತು ಮಾನಸಿಕ ಸದೃಢತೆಯನ್ನುಂಟು ಮಾಡುತ್ತದೆ. ನಿಮ್ಮ ಆತ್ಮಸ್ಥೈರ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು. ಈ ಸಂದರ್ಭ ವೇದಿಕೆಯಲ್ಲಿ ಉಪಸ್ಥಿತರಿದ್ದ, ಬೆಂಗಳೂರಿನ ಖುಷಿ ಬಯೋಟೆಕ್ ಪ್ರೈವೆಟ್ ಲಿಮಿಟೆಡ್ನ ನಿರ್ದೇಶಕರಾದ ಉಮೇಶ್ ಶೆಟ್ಟಿ ಅವರು ಮಾತನಾಡಿ, ಈಗಿನ ಕಾಲದ ವಿದ್ಯಾರ್ಥಿಗಳಿಗೆ ಅವಕಾಶಗಳು ಯಥೇಚ್ಚವಾಗಿವೆ. ಅದನ್ನು ಸದುಪಯೋಗಪಡಿಸಿಕೊಳ್ಳಿ. ಕರಾಟೆಯು ವಿದ್ಯಾರ್ಥಿಗಳಲ್ಲಿರುವ ಏಕಾಗ್ರತೆ, ಚುರುಕುತನವನ್ನು ಇನ್ನಷ್ಟು ಬಲಪಡಿಸುತ್ತದೆ. ಇರುವಂತಹ ಎಲ್ಲಾ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಕರಾಟೆಯಲ್ಲಿ ಉನ್ನತ ಸ್ಥಾನಕ್ಕೇರಿ ಎಂದು ಶುಭ ಹಾರೈಸಿದರು.


























