ಗ್ರಾಮೀಣ ಕಾಂಗ್ರೆಸ್ ಸಮಿತಿ ಬೋಳ ಮತ್ತು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಉಚಿತ ಮೆಗಾ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ದಿನಾಂಕ ಅಕ್ಟೋಬರ್ 2 ರಂದು ಬೆಳಿಗ್ಗೆ 9 ರಿಂದ ಶಿಲ್ಪಶ್ರೀ ಸಭಾಭವನ ಬೋಳ ಮಂಜರಪಲ್ಕೆ ಇಲ್ಲಿ ಆಯೋಜಿಸಲಾಗಿದೆ.
ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಸಾರ್ವಜನಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಆಚರಿಸುವ ಸಲುವಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನಂತಿಸಿದ್ದಾರೆ


























