Wednesday, September 30, 2026
Google search engine
Homeಕಾರ್ಕಳಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿಯ ಪ್ರಾಂಶುಪಾಲರಾದ ಡಾ.ನಿಕೇತನ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು, ಸಾಮಾನ್ಯ ವಿದ್ಯಾರ್ಥಿಗಳನ್ನು ಅಸಾಮಾನ್ಯ ಪ್ರತಿಭೆಗಳನ್ನಾಗಿ ರೂಪಿಸುವಲ್ಲಿ ಎನ್.ಎನ್.ಎಸ್ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ದೇಶದ ಸತ್ಪ್ರಜೆಗಳಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಎನ್.ಎಸ್. ಎಸ್. ದಿನದ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಿ ಅಭಿನಂದಿಸಲಾಯಿತು.
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಮತ್ತು ಕಾಲೇಜಿನ ಉಪ ಪ್ರಾಂಶುಪಾಲರಾದ ರವಿ ಜಿ ಇವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ ಸೇವಕಿಯರು ಎನ್.ಎಸ್.ಎಸ್ ಗೀತೆಗೆ ದನಿಯಾದರು. ಕು.ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments