Wednesday, October 7, 2026
Google search engine
Homeಕಾರ್ಕಳದಸರಾ ಹೊಸ್ತಿಲಲ್ಲಿ ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್!: ಹಾಲು ದರ ಲೀಟರ್‌ಗೆ ₹8...

ದಸರಾ ಹೊಸ್ತಿಲಲ್ಲಿ ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್!: ಹಾಲು ದರ ಲೀಟರ್‌ಗೆ ₹8 ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಜನತೆಗೆ ದಸರಾ ಹಬ್ಬದ ಮುನ್ನವೇ ಬೆಲೆ ಏರಿಕೆಯ ಬರೆ ಬೀಳುವ ಸಾಧ್ಯತೆ ಇದೆ.  ಹಾಲು ಹಾಗೂ ಹಾಲಿನ ಉತ್ಪನ್ನಗಳ ದರವನ್ನು ಹೆಚ್ಚಿಸಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೂಲಗಳ ಪ್ರಕಾರ, ನಂದಿನಿ ಹಾಲಿನ ದರವನ್ನು ಲೀಟರ್‌ಗೆ ₹8 ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡಿದ್ದು, ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮೊದಲು ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿದೆ.

ಚುನಾವಣಾ ಆಯೋಗದ ಅನುಮತಿ ದೊರೆತ ಬಳಿಕ ಅಧಿಕೃತ ಆದೇಶ ಹೊರಬೀಳಲಿದ್ದು, ಅಕ್ಟೋಬರ್ 27ರ ನಂತರ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments