ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಶು ಮಂದಿರದ ಪುಟಾಣಿಗಳಿಂದ 12 ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದಾದ ರಂಗಮಂಚ ಕಾರ್ಯಕ್ರಮ ನಡೆಯಿತು.
ಸಂಗೀತ, ನೃತ್ಯ, ರೂಪಕ ಕುಣಿತ ಭಜನೆ, ಜಾನಪದ ಮತ್ತು ಯಕ್ಷಗಾನ ನೃತ್ಯದಂತಹ ಅನೇಕ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿಕೊಟ್ಟು ತಮ್ಮ ಪ್ರತಿಭೆಯನ್ನು ತೋರ್ಪಡಿಸಿದರು.
ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ, ಅಮೃತಭಾರತಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶಕುಂತಲಾ, ಶಿಶು ಮಂದಿರದ ಮುಖ್ಯಸ್ಥೆ ಮೀನಾಕ್ಷಿ , ಅನಿತಾ, ಮಲ್ಲಿಕಾ, ನಿವೇದಿತಾ ಮತ್ತು ಪೋಷಕರು ಉಪಸ್ಥಿತರಿದ್ದರು.





























