ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ (ಪಿಯು) ಕಾಲೇಜುಗಳ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿ ಜಗದೀಶ ಯಲ್ಲಪ್ಪ ತಳವಾರ ಕಂಚಿನ ಪದಕ ವಿಜೇತರಾಗಿದ್ದು, ವಿದ್ಯಾರ್ಥಿಯ ರಾಜ್ಯ ಮಟ್ಟದ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.




























