Saturday, October 10, 2026
Google search engine
Homeಕಾರ್ಕಳಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ನಂದನ್ ಆರ್, ರಾಹುಲ್ ಜಿ.ಎನ್, ರಿಷಿ ಎಸ್ ಶೆಟ್ಟಿ, ಸುಮಿತ್ ಎಸ್ ಪ್ರಭು, ಚಿಂತನ್ ಎಮ್ ಹೆಗ್ಡೆ , ಪ್ರಣಮ್ ಹೆಚ್ .ಡಿ., ಮಿಹಿರ್ ಹೆಗ್ಡೆ , ಯು.ಶ್ರೀಶ ಮೈಪಾಡಿ, ಯಶಸ್ ಆರ್. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.

ರಾಷ್ಟ್ರ ವ್ಯಾಪಿ ನಡೆದ ಈ ಪರೀಕ್ಷೆಯಲ್ಲಿ ಒಟ್ಟಾರೆ 7406 ಮಂದಿ ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದು ಅದರಲ್ಲಿ 9 ಮಂದಿ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯಿಂದ ಆಯ್ಕೆಗೊಂಡಿರುವುದು ಅತೀವ ಸಂತೋಷವನ್ನುಂಟು ಮಾಡಿದೆ. 

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments