ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ಪ್ರತಿಭಟನೆಯನ್ನು ಮುಂದುವರಿಸಲು ನಿರ್ಧರಿಸಿದೆ.
“ಮೋದಿ ಮತ್ತು ಶಾ ಭಯಗೊಂಡಿದ್ದಾರೆ. ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ. ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ” ಎಂಬ ನಿಲುವನ್ನು ಪಕ್ಷ ವ್ಯಕ್ತಪಡಿಸಿದೆ.
ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆಯ ಬೆನ್ನಲ್ಲೇ ಭಾನುವಾರವೂ ಪ್ರತಿಭಟನೆ ಮುಂದುವರಿಸುವುದಾಗಿ CJP ಘೋಷಿಸಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರೂ ಪಕ್ಷ ತನ್ನ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಜೆಪಿಯ ರಾಷ್ಟ್ರೀಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ನೀಡುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂಬ ಸಂದೇಶವನ್ನು ನೀಡಿದರು.




























