ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಕಾಕ್ರೋಚ್ ಜನತಾ ಪಾರ್ಟಿ ಮುಖಂಡರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ದೆಹಲಿ ಕಂಟೋನ್ಮೆಂಟ್‌ನ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಿಡುಗಡೆ ಮಾಡಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ಕೈಗೊಂಡಿದ್ದ ಕ್ರಮದ ಬಳಿಕ, ತಲಾ ₹50,000 ಮೊತ್ತದ ಶ್ಯೂರಿಟಿ ಬಾಂಡ್ ಸಲ್ಲಿಸಿದ ನಂತರ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ ಎಂದು ವರದಿಯಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಜೆಪಿ ಈ ಪ್ರತಿಭಟನೆಗೆ ಕರೆ ನೀಡಿತ್ತು. ನಾಯಕರ ಬಿಡುಗಡೆಯ ಬಳಿಕವೂ ಶಾಂತಿಯುತ ಪ್ರತಿಭಟನೆ ಮುಂದುವರಿಸುವುದಾಗಿ ಸಂಘಟಕರು ತಿಳಿಸಿದ್ದಾರೆ.




























