ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ವಿರುದ್ಧ ಸುಂಕ ಹಾಗೂ ನಿರ್ಬಂಧಗಳ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ತಾವೇ ರಷ್ಯಾದಿಂದ ಇಂಧನ ಪೂರೈಕೆ ಪಡೆಯಲು ಮುಂದಾಗಿದ್ದಾರೆ.
ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಜಾಗತಿಕ ಮಾರುಕಟ್ಟೆಗೆ 3 ಲಕ್ಷ ಟನ್ ಡೀಸೆಲ್ ಪೂರೈಸಲು ರಷ್ಯಾ ಒಪ್ಪಿಕೊಂಡಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಷ್ಯಾದ ಮೇಲಿನ ಕೆಲವು ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಮಾತುಕತೆಯ ಬಳಿಕ ಈ ಒಪ್ಪಂದಕ್ಕೆ ಬರಲಾಗಿದ್ದು, ತಕ್ಷಣವೇ ಡೀಸೆಲ್ ಪೂರೈಕೆ ಆರಂಭಿಸಲು ರಷ್ಯಾ ಒಪ್ಪಿಕೊಂಡಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಅಮೆರಿಕದ ಈ ನಿರ್ಧಾರಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.




























