Monday, October 12, 2026
Google search engine
Homeಕಾರ್ಕಳದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ನಿರ್ಧಾರ ತಪ್ಪು- ಎಬಿವಿಪಿ ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಯುವಮೋರ್ಚಾ...

ದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ನಿರ್ಧಾರ ತಪ್ಪು- ಎಬಿವಿಪಿ ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಯುವಮೋರ್ಚಾ ಬೆಂಬಲ- ರಾಕೇಶ್‌ ಶೆಟ್ಟಿ ಯುವಮೋರ್ಚಾ ಅಧ್ಯಕ್ಷರು ಕಾರ್ಕಳ

ಸೈಂಟ್ ಆಗ್ನೆಸ್ ಕಾಲೇಜು ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ ನ್ಯಾಯಯುತವಾದದ್ದು.

ದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ನಿರ್ಧಾರ ತಪ್ಪು-

ಎಬಿವಿಪಿ ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಯುವಮೋರ್ಚಾ ಬೆಂಬಲ-

ರಾಕೇಶ್‌ ಶೆಟ್ಟಿ ಯುವಮೋರ್ಚಾ ಅಧ್ಯಕ್ಷರು ಕಾರ್ಕಳ

ವಿದ್ಯಾರ್ಥಿಗಳ ಧಾರ್ಮಿಕ ಭಾವನೆ ಹಾಗೂ ಹಬ್ಬದ ಆಚರಣೆಗೆ ಅವಕಾಶ ಕಲ್ಪಿಸಲು ಕಾಲೇಜು ಆಡಳಿತ ಮಂಡಳಿ ತಕ್ಷಣ ಮುಂದಾಗಬೇಕು.

ಕಾರ್ಕಳ: ಮಂಗಳೂರು ದಸರಾ ಹಬ್ಬದ ಸಂದರ್ಭದಲ್ಲಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಪೋಲಿಸರು ನಡೆಸಿದ ದೌರ್ಜನ್ಯ ಅತ್ಯಂತ ಖಂಡನೀಯ.

ಅಕ್ಟೋಬರ್ 12ರಿಂದ 28ರವರೆಗೆ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ ದಸರಾ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ತೊಂದರೆಯಾಗುತ್ತಿದೆ ಎಂಬುದು ವಿದ್ಯಾರ್ಥಿಗಳ ಅಳಲಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿರುವುದು ವರದಿಯಾಗಿದೆ.

ದಸರಾ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬವಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಕುಟುಂಬದೊಂದಿಗೆ ಹಬ್ಬ ಆಚರಿಸುವ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನೂ ಹೊಂದಿರಬೇಕು. ಆದ್ದರಿಂದ ವಿದ್ಯಾರ್ಥಿಗಳ ಮನವಿಯನ್ನು ಕಾಲೇಜು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ, ಪರೀಕ್ಷಾ ವೇಳಾಪಟ್ಟಿಯನ್ನು ಮರುಪರಿಶೀಲಿಸಬೇಕು.

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಪರೀಕ್ಷೆ ಮುಂದೂಡುವ ಸಾಧ್ಯತೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಅವರ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು.
ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವುದು ಅಗತ್ಯ. ಈ ವಿಚಾರದಲ್ಲಿ ಜಿಲ್ಲಾಡಳಿತವೂ ಮಧ್ಯಪ್ರವೇಶಿಸಿ, ವಿದ್ಯಾರ್ಥಿಗಳ ಅಹವಾಲುಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಬಿಜೆಪಿ ಯುವಮೋರ್ಚಾ ಆಗ್ರಹಿಸುತ್ತದೆ.

-ರಾಕೇಶ್‌ ಶೆಟ್ಟಿ ಕುಕ್ಕುಂದೂರು
ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷರು ಕಾರ್ಕಳ

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments