ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ಹರಿಯಾಣ ಮೂಲದ ಸುಧಾ ಯಾದವ್ ಅವರು ಬಿಜೆಪಿ ಮಾಜಿ ಸಂಸದೆಯಾಗಿದ್ದು, ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ರಾಜ್ಯಪಾಲರ ನೇಮಕ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.




























