Thursday, October 15, 2026
Google search engine
Homeಹೆಬ್ರಿವಾಲಿಬಾಲ್ ಪಂದ್ಯಾಟ: ಅಮೃತ ಭಾರತಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟ: ಅಮೃತ ಭಾರತಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ , ಬೆಳ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಜಂಟಿ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ 17ರ  ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು  ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments