Friday, October 16, 2026
Google search engine
Homeಕಾರ್ಕಳವಾಲಿಬಾಲ್ ಪಂದ್ಯಾಟದಲ್ಲಿ ಆಭೂತಪೂರ್ವ ಸಾಧನೆಗೈದ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಆಭೂತಪೂರ್ವ ಸಾಧನೆಗೈದ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ವೆ ಇಲ್ಲಿ ನಡೆದ ಪ್ರಾಥಮಿಕ ವಿಭಾಗದ 14ರ ವಯೋಮಿತಿಯ ಮೈಸೂರು ವಿಭಾಗ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ “ಕ್ರೈಸ್ಟ್ ಕಿಂಗ್” ಆಂಗ್ಲಮಾಧ್ಯಮ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ.

ತಂಡವನ್ನು ಏಳನೇ ತರಗತಿಯ ತ್ರಿಷ್ಮ, ಸೃಷ್ಟಿ ಎಸ್ ಪೂಜಾರಿ, ಕೇಟ್ಲಿನ್ ಏಂಜಲ್ ಪಿಂಟೊ, ಎಲ್ಸ ರುಬೇಲ್ ಡಿಸೋಜ, ಪ್ರನ್ವಿ ಎಸ್ ದೇವಾಡಿಗ ಹಾಗೂ ಆರನೇ ತರಗತಿಯ ನಿಶಾ ಡಿಸೋಜ, ಅಲಿಶಾ ಡಿಸೋಜ ಪ್ರತಿನಿಧಿಸಿದ್ದರು. ಇವರಲ್ಲಿ ತ್ರಿಷ್ಮ ಬೆಸ್ಟ್ ಅಟ್ಯಾಕರ್ ಹಾಗೂ ನಿಶಾ ಡಿಸೋಜ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡರು. ಅಪೂರ್ವ ಸಾಧನೆಗೈದ ವಿದ್ಯಾರ್ಥಿನಿಯರನ್ನು ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯಸ್ಥರು, ಶಿಕ್ಷಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments