ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ.ಎಲ್.ಇ ಜಿ.ಐ.ಬಿ ಪದವಿ ಪೂರ್ವ ಕಾಲೇಜು ಚಿಕ್ಕೋಡಿ ಇವರ ಸಹಯೋಗದಲ್ಲಿ ರಾಜ್ಯಮಟ್ಟದಲ್ಲಿ ನಡೆದ ಲಾನ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕಾರ್ತಿಕ್ ಎಲ್ ಎಚ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ. ಇವನು ಚಿತ್ರದುರ್ಗದ ಹರ್ಷಾ ಎಲ್ ಎಂ ಮತ್ತು ಶಿಲ್ಪ ಕೆ.ಎ ದಂಪತಿಗಳ ಸುಪುತ್ರನಾಗಿದ್ದಾನೆ.
ಇವನ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.





























