Thursday, October 22, 2026
Google search engine
Homeಅಂತಾರಾಷ್ಟ್ರೀಯಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಲ್ಲ: ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟ ಸಿಜೆಪಿ ನಾಯಕರು

ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಲ್ಲ: ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟ ಸಿಜೆಪಿ ನಾಯಕರು

ಏಳು ದಿನಗಳ ನ್ಯಾಯಾಂಗ ಬಂಧನದ ಬಳಿಕ ಸಿಜೆಪಿಯ ಪ್ರಮುಖ ನಾಯಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಬುಧವಾರ ತಿಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಂತರ್​ ಮಂತರ್​ ಅನ್ನು ಪ್ರತಿಭಟನಾ ಸ್ಥಳದ ಪಟ್ಟಿಯಿಂದ ಕೈಬಿಡಲಾಗಿರುವುದರಿಂದ ಅಲ್ಲಿ ಇನ್ನುಮುಂದೆ ಯಾವುದೇ ಪ್ರತಿಭಟನೆಗೆ ಕರೆ ನೀಡುವುದಿಲ್ಲ ಎಂದು ಇಬ್ಬರೂ ನಾಯಕರು ನ್ಯಾಯಾಲಯಕ್ಕೆ ಲಿಖಿತ ಮುಚ್ಚಳಿಕೆ ಸಲ್ಲಿಸಿದ್ದಾರೆ.

ತಲಾ 50,000 ರೂ. ಮೊತ್ತದ ವೈಯಕ್ತಿಕ ಮತ್ತು ಶ್ಯೂರಿಟಿ ಬಾಂಡ್‌ಗಳನ್ನು ಸಲ್ಲಿಸಿದ ನಂತರ ನ್ಯಾಯಾಲಯ ಇವರ ಬಿಡುಗಡೆಗೆ ಆದೇಶಿಸಿತು. ದೆಹಲಿ ಪೊಲೀಸರು ಇವರನ್ನು ಇನ್ನೂ ಮೂರು ದಿನಗಳ ಕಾಲ ಕಸ್ಟಡಿಗೆ ಕೋರಿದ್ದರೂ, ನ್ಯಾಯಾಲಯ ಅದನ್ನು ತಿರಸ್ಕರಿಸಿ ಷರತ್ತುಬದ್ಧ ಬಿಡುಗಡೆ ನೀಡಿದೆ.

ದಾಸ್ ಮತ್ತು ರಂಕಾ ನ್ಯಾಯಾಲಯಕ್ಕೆ ಸಲ್ಲಿಸಿದ ಲಿಖಿತ ಪತ್ರದಲ್ಲಿ ಈ ಕೆಳಗಿನ ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ. ನಾವು ಯಾವುದೇ ರೀತಿಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗ ತರುವುದಿಲ್ಲ. ನ್ಯಾಯಾಂಗ ಮತ್ತು ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳವಾಗಿ ಮರುಘೋಷಿಸುವವರೆಗೆ ಅಲ್ಲಿ ಯಾವುದೇ ಪ್ರದರ್ಶನ ಅಥವಾ ಆಂದೋಲನಕ್ಕೆ ಕರೆ ನೀಡುವುದಿಲ್ಲ ಎಂದಿದ್ದಾರೆ.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments