ನಿಟ್ಟೆ ತಾಂತ್ರಿಕ ಕಾಲೇಜು ಹಾಗೂ ಅದರ ಹಳೆವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನಡೆದ ಎಕ್ಸ್ಪ್ರೊ 2024-25
ನಿಟ್ಟೆ:ಪ್ರಪಂಚದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಅನ್ವೇಷಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು ಎಂದು ಸಾಸ್ಕೆನ್ ಟೆಕ್ನಾಲಜೀಸ್ ಲಿಮಿಟೆಡ್ನ ಕ್ಯಾಂಪಸ್ ಕನೆಕ್ಟ್ ಮುಖ್ಯಸ್ಥ ಗುರುರಾಜ್ ರಾವ್ ಎಚ್ ಅಭಿಪ್ರಾಯಪಟ್ಟರು.
ಅವರು ಅ.29ರಂದು ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ತನ್ನ ಹಳೆಯ ವಿದ್ಯಾರ್ಥಿಗಳ ಸಂಘವಾದ ‘ವೆನಮಿತಾ’ದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ಯುಜಿ ಪ್ರಾಜೆಕ್ಟ್ಸ್, ಎಕ್ಸ್ಪ್ರೊ 2024-25ರ ವಾರ್ಷಿಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮವು ವಿದ್ಯಾರ್ಥಿ ಯೋಜನೆಗಳನ್ನು ಪ್ರದರ್ಶಿಸುವ ಮತ್ತು ತಾಂತ್ರಿಕ ನಾವೀನ್ಯತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ್ದು ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕೌಶಲ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವದ ಚಿಂತನೆಯನ್ನು ಪ್ರತಿಪಾದಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಸಮಸ್ಯೆ ಪರಿಹಾರವನ್ನು ಉತ್ತೇಜಿಸುವ ಕಲಿಕೆಯ ವಾತಾವರಣವನ್ನು ಬೆಳೆಸುವ ಸಂಸ್ಥೆಯ ಬದ್ಧತೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಈ ಅವಕಾಶಗಳನ್ನು ಗಂಭೀರವಾಗಿ ಪರಿಗಣಿಸಿ ಈ ಯೋಜನೆಗಳಿಗೆ ಕೆಎಸ್ಸಿಎಸ್ಟಿ ಧನಸಹಾಯಕ್ಕೆ ಅರ್ಜಿ ಸಲ್ಲಿಸುವಂತೆ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಪ್ರದರ್ಶನದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಒಟ್ಟು ೩೩೩ ಯೋಜನೆಗಳನ್ನು ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ಎಕ್ಸ್ ಪ್ರೋ ಆಬ್ಸ್ಟ್ರ್ಯಾಕ್ಟ್ ವಾಲ್ಯೂಮ್-೨೩ ನ್ನು ಬಿಡುಗಡೆಗೊಳಿಸಲಾಯಿತು.
ಎಕ್ಸ್ಪ್ರೊ 2024-25ರ ಸಂಯೋಜಕಿ ಡಾ.ನಯನಾ ಶೆಟ್ಟಿ ಸ್ವಾಗತಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಜತ್ತಣ್ಣ ಕಾರ್ಯಕ್ರಮ ನಿರೂಪಿಸಿದರು.