Sunday, October 25, 2026
Google search engine
Homeರಾಜ್ಯಕನ್ನಡಿಗರಿಗೆ ಉದ್ಯೋಗದಲ್ಲಿ ತಾರತಮ್ಯ ಮಾಡಿದರೆ ಕಠಿಣ ಕ್ರಮ: ಡಿಕೆ ಶಿವಕುಮಾರ್ ಎಚ್ಚರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ತಾರತಮ್ಯ ಮಾಡಿದರೆ ಕಠಿಣ ಕ್ರಮ: ಡಿಕೆ ಶಿವಕುಮಾರ್ ಎಚ್ಚರಿಕೆ

ಖಾಸಗಿ ಮತ್ತು ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು ಅಥವಾ ಭಾಷೆಯ ಆಧಾರದ ಮೇಲೆ ತಾರತಮ್ಯ ಮಾಡುವುದು ಕಂಡುಬಂದರೆ, ಅಂತಹ ಸಂಸ್ಥೆಗಳ ವಿರುದ್ಧ ಸರ್ಕಾರ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಐಟಿ ಕಂಪನಿಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬ ಯುವತಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.

“ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಯಾವುದೇ ಖಾಸಗಿ ಸಂಸ್ಥೆಯು ಕನ್ನಡಿಗರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಅವರ ವಿರುದ್ಧ ಸೂಕ್ತ ಹಾಗೂ ಕಠಿಣ ಕ್ರಮ ಕೈಗೊಳ್ಳಲಿದೆ” ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments