Monday, October 26, 2026
Google search engine
Homeಹೆಬ್ರಿಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ ಗಳಿಕೆ

ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ ಗಳಿಕೆ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಬಾಲಕಿಯರ ತಂಡವು ದ್ವಿತೀಯ (Runner-Up) ಸ್ಥಾನವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದೆ.

ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡು ತಂಡದ ವಿರುದ್ಧ ರೋಚಕ ಹೋರಾಟ ನಡೆಸಿತು.

ಈ ರಾಷ್ಟ್ರಮಟ್ಟದ ತಂಡದಲ್ಲಿ ಅಮೃತ ಭಾರತಿ ಪಿಯು ಕಾಲೇಜು, ಹೆಬ್ರಿಯ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿ ಕೆ. ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು ನಮ್ಮ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ.

ಅವನಿ ಕೆ. ಅವರ ಈ ಸಾಧನೆಗೆ ಅಮೃತ ಭಾರತಿ ಟ್ರಸ್ಟ್‌ನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments