ಶಿರ್ಲಾಲು ಪಂಡಿತಬೆಟ್ಟುವಿನ ದಯಾನಂದ ನಾಯಕ್ (57) ಅವರು ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಶಿರ್ಲಾಲು ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ಪಡಿಬೆಟ್ಟು ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷರಾಗಿ ಹತ್ತು ವರ್ಷ ಕಾರ್ಯನಿರ್ವಹಿಸಿದ್ದರು. ಶಿರ್ಲಾಲು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಹಾಗೂ ನಿಡ್ಡೆಪಾದೆ ಗರಡಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದ ಅವರು, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಅವರು ತಂದೆ-ತಾಯಿ, ಪತ್ನಿ, ಮಗ, ಮಗಳು ಹಾಗೂ ಬಂಧು-ಬಳಗದವರನ್ನು ಅಗಲಿದ್ದಾರೆ.






























