ಗೃಹ ಕಚೇರಿ ‘ಕೃಷ್ಣಾ’ದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಡ್ಯಾಶ್ಬೋರ್ಡ್ ಮತ್ತು ಸಾಮಾಜಿಕ ಜಾಲತಾಣಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಕೆಶಿ, ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಗ್ರಾ.ಪಂಚಾಯತ್ ಮಟ್ಟದಲ್ಲಿಯೂ ರಚಿಸಲಾಗುತ್ತಿದ್ದು ಈ ಸಮಿತಿಗಳ ಸದಸ್ಯರು ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು. ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರಿಯಾಗಬೇಕು ಎಂದು ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರು ಪ್ರತೀ ಫಲಾನುಭವಿಯ ಮನೆಗೆ ಭೇಟಿ ನೀಡಬೇಕು. ಆ ಮನೆಯ ಗೋಡೆಗೆ ‘ಗ್ಯಾರಂಟಿ ಮನೆ’ ಸ್ಟಿಕ್ಕರ್ ಹಾಕಬೇಕು. ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ಸರಕಾರ ನೀಡುವ ಅನುಕೂಲಗಳನ್ನು ಮನವರಿಕೆ ಮಾಡಿ, ಸಾಮಾಜಿಕ ಜಾಲತಾಣಗಳನ್ನು ಎಲ್ಲ ಹಂತಗಳಲ್ಲಿ. ಪರಿಣಾಮಕಾರಿಯಾಗಿ ಬಳಸಬೇಕು ಎಂದು ತಿಳಿಸಿದ್ದಾರೆ.






























