ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಚಿಸಿರುವ ಎಸ್‌ಐಟಿ ಮುಖ್ಯಸ್ಥರನ್ನು ಸರ್ಕಾರ ಬದಲಿಸಿದೆ.
ನೂತನ SIT ಮುಖ್ಯಸ್ಥರಾಗಿ ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಮರು ನೇಮಕ ಮಾಡಲಾಗಿದೆ. ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಕೈಬಿಡುವಂತೆ ಐಜಿಪಿ ಶಶಿಕುಮಾರ್ ಹಾಗೂ ವೆಂಕಟೇಶ್ ಪ್ರಸನ್ನ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಕೋರಿಕೆಯನ್ನು ಪರಿಗಣಿಸಿ ಸರ್ಕಾರ ಇಬ್ಬರನ್ನೂ ಎಸ್‌ಐಟಿಯಿಂದ ಕೈಬಿಟ್ಟಿದೆ. ಆ ಸ್ಥಾನಗಳಿಗೆ ರಾಥೋಡ್ ಮತ್ತು ಶ್ರೀನಿಧಿ ಅವರನ್ನು ನೇಮಿಸಿದೆ.






























