Sunday, November 1, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್: ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಅನ್ವೇಷಣೆ-2026

ಕ್ರೈಸ್ಟ್ ಕಿಂಗ್: ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಅನ್ವೇಷಣೆ-2026

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಅನ್ವೇಷಣೆ 2026’ ಅದ್ದೂರಿಯಾಗಿ ನಡೆಯಿತು.

ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟಕರಾಗಿ ಚಲನಚಿತ್ರ ಹಾಸ್ಯನಟ ಹಾಗೂ ನಿರ್ದೇಶಕರಾಗಿರುವ ಪ್ರಸನ್ನ ಶೆಟ್ಟಿ ಬೈಲೂರು ಅವರು ಆಗಮಿಸಿದರು. ದೀಪ ಬೆಳಗುವುದರ ಮೂಲಕ ಅನ್ವೇಷಣೆ 2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು “ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಕೂಡ ಹೆಚ್ಚಿನ ಮಹತ್ವ ನೀಡಬೇಕು ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ನಮ್ಮ ಅನುಭವವನ್ನು ಹೆಚ್ಚಿಸುತ್ತದೆ.” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ನಾರಾವಿ ಸೈಂಟ್ ಆ್ಯಂಟನಿ ಚರ್ಚ್ನ ಸಹಾಯಕ ಧರ್ಮಗುರುಗಳು ಹಾಗೂ ಸೈಂಟ್ ಆ್ಯಂಟನಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರಾದ ರೂಪೇಶ್ ರವೀನ್ ತಾವ್ರೋ ಮಾತನಾಡಿ “ಪ್ರತಿಭೆ ಎಂಬುದು ನಮ್ಮೊಳಗೆ ಅಡಗಿರುವ ಅಮೂಲ್ಯ ಸಂಪತ್ತು ಅದನ್ನು ಗುರುತಿಸಿ ಬೆಳೆಸಿ ಸೂಕ್ತ ವೇದಿಕೆಯಲ್ಲಿ ಪ್ರದರ್ಶಿಸಿದಾಗ ಮಾತ್ರ ನಮ್ಮ ಸಾಮರ್ಥ್ಯಕ್ಕೆ ನಿಜವಾದ ಮೌಲ್ಯ ದೊರೆತಂತಾಗುತ್ತದೆ” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ “ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪ್ರಯತ್ನ ಹಾಗೂ ಸೃಜನಶೀಲತೆಯನ್ನು ತಮ್ಮಲ್ಲಿ ಮೈಗೂಡಿಸಿಕೊಂಡಾಗ ಯಶಸ್ಸನ್ನು ಸಾಧಿಸಲು ಸಾಧ್ಯ” ಎಂದು ಹೇಳಿದರು. ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮಿನಾರಾಯಣ ಕಾಮತ್ ಪ್ರಸ್ತಾವನೆಗೈದರು, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಕುಮಾರಿ ಮಧುಶ್ರೀ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ದೀಪಕ್ ಕೆ ಅವರು ನಿರೂಪಿಸಿ ವಂದಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ದಯಾನಂದ ಮಡ್ಕೇಕರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಸದಸ್ಯರಾದ ಜೋಕಿಮ್ ಮೈಕಲ್ ಮೆನೆಜಸ್ ಅತಿಥಿಗಳಾಗಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಬಹುಮಾನ ವಿತರಿಸಿದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್, ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಜಾಲಿ ಜೇಕಬ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿ ಪೂರ್ವ ವಿಭಾಗದ ನಿತೇಶ್ ಶೆಟ್ಟಿ, ಪ್ರೌಢ ಶಾಲಾ ವಿಭಾಗದ ವಿಶ್ವನಾಥ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಆರತಿ ಮತ್ತು ದೀಪಕ್ ಕೆ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ಶಿಜಿ ಸಿ ಕೆ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments