ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಕರ್ನಾಟಕ ಸರ್ಕಾರ ಹಾಗೂ ವಿಜಯ ಮಕ್ಕಳ ಕೂಟ, ಆತ್ರಾಡಿ, ಬೈಂದೂರು ವಲಯ ಇವರ ಸಹಯೋಗದಲ್ಲಿ ಅಕ್ಟೋಬರ್ 31, 2026 ರಂದು ನಡೆದ ಜಿಲ್ಲಾ ಮಟ್ಟದ 17ರೊಳಗಿನ ವಯೋಮಿತಿಯ ಆರ್ಟಿಸ್ಟಿಕ್ ಪೆಯರ್ (ARTISTIC PAIR) ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ನಕ್ರೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಪ್ರೀತ್ ನಾಯ್ಕ ಹಾಗೂ ಪ್ರಣೇಶ್ ಅವರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಮಂಡ್ಯದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ರೇಣುಕಾ ಅವರು ತರಬೇತಿ ನೀಡಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, SDMC ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದಿಸಿ, ಮುಂದಿನ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.































