ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆ ಹಾಗೂ ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜು, ಕಾರ್ಕಳದ ಲಲಿತ ಕಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ಡಾ. ಶಿವರಾಮ ಕಾರಂತರ ಕುರಿತು ‘ಅರಿವಿನ ಬೆಳಕು’ ಉಪನ್ಯಾಸ – 19 ಕಾರ್ಯಕ್ರಮ ನಡೆಯಿತು.
ಎಸ್.ವಿ. ಎಜ್ಯುಕೇಷನ್‌ನ ಕಾರ್ಯದರ್ಶಿ ಶ್ರೀ ಕೆ.ಪಿ. ಶೆಣೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಆಶಯ ನುಡಿಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೀತಾ ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ಸೀತಾರಾಮ್ ನಾಯಕ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿದರು. ಕು. ನಿರೀಕ್ಷಾ ಧನ್ಯವಾದ ಸಮರ್ಪಿಸಿದರು. ಕು. ಸಹನಾ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದ ಅಂಗವಾಗಿ ಯಕ್ಷ ರಂಗಾಯಣ, ಕಾರ್ಕಳ ಇವರಿಂದ ‘ಕಾರಂತ ಕಥನ’ ರಂಗಪ್ರದರ್ಶನ ನಡೆಯಿತು.































