ಮಣಿಪಾಲ ವಿದ್ಯಾನಗರದಲ್ಲಿರುವ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಶಾಂತಿರಮೇಶ್ ಪೈ ಸಭಾಂಗಣದಲ್ಲಿ ಜಿಲ್ಲಾಪಂಚಾಯತಿ, ಸಮಾಜಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತು ಮಾನವ ಹಕ್ಕುಗಳ ಇಲಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಯುವಸಂಸತ್-2026ರ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಭಾಗವಹಿಸಿ, ಸಮಾಜ ಕಲ್ಯಾಣ ಇಲಾಖೆಯ ಸಚಿವನಾಗಿ ಸ್ಪರ್ಧಿಸಿ ಉತ್ತಮವಾದ ವಾಕ್‌ಚಾತುರ್ಯದಿಂದ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ. ಈತ ಇವತ್ತೂರಿನ ಶ್ರೀ ಆನಂದ ಪೂಜಾರಿ ಮತ್ತು ಶ್ರೀಮತಿ ಸುಗಂಧಿ ದಂಪತಿಗಳ ಪುತ್ರನಾಗಿದ್ದಾನೆ.
ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿವರು ಅಭಿನಂದಿಸಿ ಶುಭಕೋರಿದ್ದಾರೆ.































