ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಪತ್ತೆಗಾಗಿ ಪೊಲೀಸರು ವಿವಿಧೆಡೆ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಇಲ್ಲಿಗೆ ತಲುಪಿದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸುವ ಸಾಧ್ಯತೆಯಿದೆ.
ಬಂಧನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆರೋಪಿಗಳ ಹೆಸರು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.































